ಮಂಗಳೂರು, ಸೆ 26 (MSP): ಮಂಗಳೂರಿನ ಪಂಚಮಿ ಬೋಳಾರ್ ದುಬೈ ನಲ್ಲಿ ನಡೆಯುತ್ತಿರುವ ಏಷ್ಯನ್ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 82 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, ಎರಡು ಬೆಳ್ಳಿಯ ಪದಕಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.
ಪಂಚಮಿ ಬೋಳಾರ್ ಪ್ರದೀಪ್ ಕುಮಾರ್ ಆಚಾರ್ಯ ಅವರಿಂದ ತರಬೇತಿ ಪಡೆಯುತ್ತಿದ್ದು, ನಗರದ ಸೈಂಟ್ ಜೆರೋಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಹಾಗೂ ವೀರ ಮಾರುತಿ ವ್ಯಾಯಾಮ ಶಾಲೆಯ ಸದಸ್ಯೆಯಾಗಿದ್ದಾರೆ.