ಪುತ್ತೂರು, ಸೆ 27 (MSP): ಕೆದಿಲ ಗ್ರಾಮದಬಡೆಕ್ಕಿಲ ನಿವಾಸಿ ಶ್ಯಾಂ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ರಾಮಚಂದ್ರಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಪುತ್ತೂರು ನಿವಾಸಿ ಬೋನಂತಾಯ ಶಿವಶಂಕರ್ ಭಟ್ ವಿರುದ್ದ ಬೆಂಗಳೂರು ಸಿಐಡಿ ಪೊಲೀಸರು ಪುತ್ತೂರು ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದ್ದಾರೆ.
೨೦೧೪ ರ ಸೆ.೧ ರಂದು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಶ್ಯಾಂ ಪ್ರಸಾದ್ ಶಾಸ್ತ್ರಿ ಅವರು ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ದ ಅತ್ಯಾಚಾರ ಆರೋಪ ಮಾಡಿದ್ದ ಗಾಯಕಿ ಪ್ರೇಮಲತಾ ಶಾಸ್ತ್ರಿಯ ಪತಿ ದಿವಾಕರ ಶಾಸ್ತ್ರಿ ಅವರ ತಮ್ಮ ಆತ್ಮಹತ್ಯೆ ಗೆ ಪ್ರಚೋದನೆ ಬೆದರಿಕೆ ಹಾಗೂ ನಿಂದನೆ ಆರೋಪದ ಮೇರೆಗೆ ಪುತ್ತೂರು ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ಬುಧವಾರ ಸಿಐಡಿ ಡಿವೈಎಸ್ಪಿ ಆರ್.ವಾಸು ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಳಿಕ ಸರ್ಕಾರ ಸಿಐಡಿಗೆ ವಹಿಸಿತ್ತು. ಅಲ್ಲದೇ ಈ ಮೂವರು ದೂರವಾಣಿಯಲ್ಲಿ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ದಾಖಲೆಯನ್ನು ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದೆ ಎಂದು ತಿಳಿದು ಬಂದಿದೆ.