ಮಂಗಳೂರು, ಮೇ 15 (DaijiworldNews/MS): ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ತೌಕ್ತೇ ಚಂಡಮಾರುತದ ಕರಾವಳಿಯಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ. ದ.ಕ ಜಿಲ್ಲೆಯಲ್ಲಿ ಕರಿ ಮೋಡ ಅವರಿಸಿದಂತ ವಾತಾವರಣವಿದ್ದು, ದಿನವಿಡೀ ಮಳೆ ಸುರಿಯುವ ಎಲ್ಲ ಲಕ್ಷಣ ಗೋಚರಿಸುತ್ತಿದೆ.

ಕರ್ವಾಳಿಯಲ್ಲಿ ಮೇ.14 ರಿಂದ ಮೇ.16 ರವರೆಗೆ ರೆಡ್ ಅಲರ್ಟ್ ,17 -18 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದ ಕೆಲವೆಡೆ ಮೇ.14 ರ ಶುಕ್ರವಾರ ರಾತ್ರಿಯೇ ಮಳೆ ಪ್ರಾರಂಭವಾಗಿದ್ದು , ಇದು ಇಂದು ಕೂಡಾ ಮುಂದುವರೆದಿದೆ. ಮಳೆಯ ಜೊತೆ ಗಾಳಿ ಕೂಡ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ.
ಚಂಡಮಾರುತದ ಪರಿಣಾಮ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಮುನ್ನೆಚ್ಚರಿಕಾ ಉದ್ದೇಶದಿಂದ ಜಿಲ್ಲೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿದೆ.ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಜಿಲ್ಲಾಡಳಿತದಿಂದ ಕಂಟ್ರೋಲ್ ರೂಂ :
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳ ತುರ್ತಸೇವೆಗೆ ಕಂಟ್ರೋಲ್ ರೂಂ ನಂಬರ್: 1077 ಹಾಗೂ 9483908000 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.