ಬಂಟ್ವಾಳ, ಅ 6: ಬೈಕ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ದೈಕಿನಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಧರ್ಮಸ್ಥಳ ನಿವಾಸಿ ಸುರೇಶ್ (35) ಎಂದು ಗುರುತಿಸಲಾಗಿದೆ. ಕಾರು ಗುರುವಾಯನಕೆರೆಯಿಂದ ಎನ್.ಸಿ.ರೋಡಿನತ್ತ ತೆರಳುತ್ತಿದ್ದರೆ ಸುರೇಶ್ ಇನ್ನೂ ಕೂಡಾ ನಂಬರ್ ನೋಂದಣಿ ಆಗದ ಹೊಸ ಬೈಕ್ನಲ್ಲಿ ಧರ್ಮಸ್ಥಳದತ್ತ ಸಂಚರಿಸುತ್ತಿದ್ದಾಗ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣ ಬಂಟ್ವಾಳ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಂಜೆಯ ವೇಳೆಗೆ ಮೃತಪಟ್ಟಿದ್ದಾರೆ. ಇವರು ಧರ್ಮಸ್ಥಳ ದೇವಸ್ಥಾನದ ಸಿಬ್ಬಂದಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಮುಂದಿನ ತನಿಖೆ ನಡೆದಿದೆ.