ಬಂಟ್ವಾಳ,ಅ 8: ಇಲ್ಲಿನ ಭಂಡಾರಿಬೆಟ್ಟುನಲ್ಲಿ ಅಕ್ಟೋಬರ್ 8 ರಂದು ಬೆಳಗ್ಗೆ ರಸ್ತೆ ಬದಿಯಲ್ಲಿ ಶವ ಪತ್ತೆಯಾಗಿದೆ. ಮೃತರನ್ನು ಸ್ಥಳೀಯ ನಿವಾಸಿ , ಕೂಲಿ ಕಾರ್ಮಿಕ ರವಿ ಕಾಯರ್ ಮಾರ್(47) ಎಂದು ಗುರುತಿಸಲಾಗಿದೆ. ರಸ್ತೆ ಬದಿಯ ಪೊದೆಯಲ್ಲಿ ಎಸೆದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ವಾಹನ ಅಪಘಾತ ಅಥವಾ ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.