ಉಳ್ಳಾಲ, ಸೆ 08(SM): ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳೂರು ಹೊರ ವಲಯದ ಕೋಟೆಕಾರ್ ನಲ್ಲಿ ನಡೆದಿದೆ.
ಆರೋಪಿಯನ್ನು ಉಪ್ಪಳ ನಿವಾಸಿ ಅಬ್ದುಲ್ ಲತೀಫ್ ಖಾದರ್ ಎಂದು ಗುರುತಿಸಲಾಗಿದೆ. ಆರೋಪಿ ಖಾಸಗಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿದ್ದ. ಇಂದು ಮಧ್ಯಾಹ್ನ ಸಹೋದ್ಯೋಗಿ ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಹಾಗೂ ಈ ಬಗ್ಗೆ ಠಾಣೆಗೆ ದೂರು ನೀಡಿದ್ದಾಳೆ. ಬಳಿಕ ವಿಚಾರಣೆ ಮುಂದಾದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.