ಮಂಗಳೂರು, ಅ 13(SM): ಕಾನೂನು ಪದವಿ ಪಡೆದು `ಲಾ' ಅಭ್ಯಾಸ ಮಾಡುತ್ತಿದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕದ್ರಿ ವಸತಿ ಸಮುಚ್ಚಯವೊಂದರಲ್ಲಿ ಶನಿವಾರ ಸಂಜೆ ನಡೆದಿದೆ.
ಬೆಳ್ತಂಗಡಿಯಲ್ಲಿ ಕಾನೂನು ಅಭ್ಯಾಸ ಮಾಡಿತ್ತಿದ್ದ ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಕಾಣಿಯೂರಿನವರೆಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಅವರು ಬೆಳ್ತಂಗಡಿಯ ಲಾಯರ್ ಅವರ ಮಾರ್ಗದರ್ಶನದಲ್ಲಿ ಕಳೆದ 8 ತಿಂಗಳಿಂದ ಅಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.
ಘಟನೆಯ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.