ಮಂಗಳೂರು, ಅ 14(SM): ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹಾಗೂ ಕರ್ನಾಟಕ ವಿಧಾನಪರಿಷತ್ ಸದಸ್ಯ ಬಿ.ಎಂ. ಫಾರೂಖ್ ಅವರ ನೂತನ ಕಚೇರಿಗಳನ್ನು ಮಂಗಳೂರಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಿದರು.
ನಗರದ ಕದ್ರಿ ಶಿವಭಾಗ್ ನಲ್ಲಿರುವ ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಎಸ್.ಎಲ್. ಭೋಜೇಗೌಡರ ಕಚೇರಿಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜ, ಬಿ.ಎಂ. ಫಾರೂಖ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಅಯುಕ್ತ ಟಿ.ಆರ್. ಸುರೇಶ್, ಮೇಯರ್ ಭಾಸ್ಕರ್, ಮಾಜಿ ಶಾಸಕ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಶಾಸಕ ಫಾರೂಕ್ ಕಚೇರಿ ಉದ್ಘಾಟನೆ:
ಇನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿ.ಎಂ. ಫಾರೂಖ್ ಅವರ ಕಚೇರಿಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಶಾಸಕರ ಕಚೇರಿಗಳು ಜನಸಂಪರ್ಕ ಕೇಂದ್ರವಾಗಿ, ಜನರ ಸಮಸ್ಯೆಗಳಿಗೆ ಪರಿಹಾರ ಸಿಗುವಂತಾಗಲಿ ಎಂದು ಹಾರೈಸಿದರು.
ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಶಾಸಕರಾದ ಐವನ್ ಡಿಸೋಜ, ಬಿ.ಎಂ. ಫಾರೂಖ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಅಯುಕ್ತ ಟಿ.ಆರ್. ಸುರೇಶ್, ಮೇಯರ್ ಭಾಸ್ಕರ್ ಮೊಯ್ಲಿ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಸಕರಾದ ಬಿ. ಎಂ. ಫಾರೂಕ್ ರವರು ತಮ್ಮ ಶಾಸನ ಸಭಾ ಸದಸ್ಯತ್ವದಿಂದ ಪಡೆದ ಗೌರವಧನವನ್ನು ಬಡ ಕ್ಯಾನ್ಸರ್ ಕಿಡ್ನಿ ಹೃದಯದ ಖಾಯಿಲೆಗಳಿಂದ ಬಳಲುವ ರೋಗಿಗಳಿಗೆ ನೀಡುವ ನಿರ್ಧಾರದಂತೆ ಸುಮಾರು 38 ಮಂದಿ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ನೆರವು ವಿತರಿಸಿದರು.