ಬೆಂಗಳೂರು,ಅ 15 (MSP): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅ.14 ರ ಭಾನುವಾರ ಮಧ್ಯರಾತ್ರಿ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರವಾದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು ಅವರೊಂದಿಗೆ ಆಸ್ಪತ್ರೆಯಲ್ಲಿ ಕುಟುಂಬದ ಸದಸ್ಯರು ಇದ್ದು ಅವರನ್ನು ಉಪಚರಿಸುತ್ತಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರದಂದು ಶಿವರಾಜ್ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆಂದು ಶಿವರಾಜ್ ಕುಮಾರ್ ಭರವಸೆ ನೀಡಿದ್ದರು ಎನ್ನಲಾಗಿತ್ತು. ಇದೀಗ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಕಾರಣ ಜೆಡಿಎಸ್ ಪರ ಚುನಾವಣಾ ಪ್ರಚಾರ ನಡೆಸುವುದು ಅನುಮಾನ ಎಂದು ಮೂಲಗಳು ತಿಳಿಸಿವೆ
ಆಸ್ಪತ್ರೆಗೆ ಭೇಟಿ ನೀಡಿದ ನಟ ವಿನಯ್ ರಾಜ್ಕುಮಾರ್ ತಮ್ಮ ಚಿಕ್ಕಪ್ಪನ ಆರೋಗ್ಯ ವಿಚಾರಿಸಿದರು. ಇದಕ್ಕೂಮೊದಲು ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತ, ನಟ ಪುನೀತ್ ರಾಜ್ ಕುಮಾರ್, ನಿರ್ದೇಶಕ ಪ್ರೇಮ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.