ಬೆಂಗಳೂರು, ಅ 15(SM): ಬಳ್ಳಾರಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದೆ. ಪಕ್ಷದ ಹಿರಿಯರ ನಿರ್ಧಾರದಂತೆ ವಿ.ಎಸ್.ಉಗ್ರಪ್ಪ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಳೆದ ಒಂದು ವಾರದಿಂದಲೂ ಸಾಕಷ್ಟು ಭಿನ್ನಭೀಪ್ರಾಯಗಳಿದ್ದವು. ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಹುತೇಕ ಅಭ್ಯರ್ಥಿಯಾಗಿ ಆಯ್ಕೆಯಾಗುವುದು ಖಚಿತವಾಗಿತ್ತು. ಆದರೆ ಎರಡು ದಿನಗಳಲ್ಲಿ ಬಹುವಾಗಿ ಚರ್ಚೆಯಲ್ಲಿದ್ದ ವಿಧಾನ ಪರಿಷತ್ ಸದಸ್ಯ ಉಗ್ರಪ್ಪ ಹೆಸರು ಕೊನೆಯ ಕ್ಷಣದಲ್ಲಿ ಅಂತಿಮಗೊಳಿಸಲಾಗಿದೆ.
ಈ ಸಂಬಂಧ ಎಐಸಿಸಿ ಅಧಿಕೃತ ಮೂಲಗಳು ತಿಳಿಸಿವೆ. ಬಳ್ಳಾರಿ ಲೋಕಸಭೆ ಉಪಚುನಾವಣೆಗೆ ವಿ.ಎಸ್. ಉಗ್ರಪ್ಪ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಆನಂದ ನ್ಯಾಮಗೌಡ ಅವರ ಹೆಸರನ್ನು ಅಂತಿಮಗೊಳಿಸಿದೆ.