ಮಂಗಳೂರು, ಅ 16(SM): ಆರ್.ಟಿ.ಸಿಯಲ್ಲಿನ ಕೆಲವೊಂದು ಲೋಪದೋಷಗಳಿಂದಾಗಿ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಜನತೆಯ ಸಮಸ್ಯೆಗಳಿಗೆ ಸಹಾಯಕ ಆಯುಕ್ತರ ಮಟ್ಟದಲ್ಲಿ ಪರಿಹಾರ ಒದಗಿಸಲು ನವೆಂಬರ್ 12ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಮಂಗಳುರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಪರಿವರ್ತನೆ ಸೇರಿದಂತೆ ಕಂದಾಯ ಇಲಾಖೆಗೆ ಸಂಭಂಧಿಸಿದ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲಿ ಅರ್ಥ ಮಾಡಿಕೊಳ್ಳಲಾಗುವುದು. ಹಾಗೂ ಶಾಶ್ವತ ಪರಿಹಾರ ಒದಗಿಸಲು ಈಗಾಗಲೇ ಕಂದಾಯ ಸಚಿವರು, ನಗರಾಭಿವೃದ್ಧಿ ಕಾರ್ಯದರ್ಶಿ ಉಪಸ್ಥಿತಿಯಲ್ಲಿ ಸಭೆ ನಡೆದಿದೆ.
ಆರ್.ಟಿ.ಸಿಯಲ್ಲಿನ ಕೆಲವೊಲದು ಸಮಸ್ಯೆಗಳಿಂದಾಗಿ ಜನರು ಭೂ ಪರಿವರ್ತನೆ ಸೇರಿದಂತೆ ಕಂದಾಯ ಇಲಾಖೆಯ ಹಲವಾರು ಸಮಸ್ಯೆಗಳಿಗೆ ಈ ಅದಾಲತ್ ನಲ್ಲಿ ನೇರ ಸ್ಥಳದಲ್ಲೇ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು. ಮಾತ್ರವಲ್ಲದೆ ತಾಲೂಕು ಮಟ್ಟದಲ್ಲಿಯೂ ಕಂದಾಯ ಅದಾಲತ್ ನಡೆಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಖಾದರ್ ತಿಳಿಸಿದ್ದಾರೆ.