ಮಡಿಕೇರಿ, ಅ 17(SM): ತಲಕಾವೇರಿಯಲ್ಲಿ ತುಲಾಸಂಕ್ರಮಣದಂದು ಉದ್ಭವಿಸುವ ಪವಿತ್ರ ತೀರ್ಥೋದ್ಭವಕ್ಕೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಾಕ್ಷಿಯಾಗಿದ್ದಾರೆ. ಕೊಡಗು ಜಿಲ್ಲೆ ಮಡಿಕೆರಿ ತಾಲೂಕಿನ ತಲಕಾವೇರಿಯಲ್ಲಿನ ಅಪರೂಪದ ಕ್ಷಣವನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಣ್ತುಂಬಿಕೊಂಡಿದ್ದಾರೆ. ಅಲ್ಲದೆ ಸಹಸ್ರಾರು ಭಕ್ತರು ಈ ಒಂದು ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.
ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ:
ತಲಕಾವೇರಿಗೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂದು ಭವಿಷ್ಯ ನುಡಿಯಲಾಗಿತ್ತು. ಆದರೆ ಇಂದು ತಲಕಾವೇರಿಗೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಮೌಢ್ಯಕ್ಕೆ ಸೆಡ್ಡು ಹೊಡೆದಿದ್ದಾರೆ.
ಇನ್ನು ಕಾವೇರಿ ತೀರ್ಥೋದ್ಭವ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಪ್ರಕೃತಿ ವಿಕೋಪದ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿ ಮಾತನಾಡಿದ ಅವರು ಸಂತ್ರಸ್ತರ ಸಮಸ್ಯೆಗಳನ್ನು ಕೇಳಿ ಅದಕ್ಕೆ ಪರಿಹಾರ ನೀಡಲು ಬಂದಿದ್ದೇನೆಯೇ ಹೊರತು, ನಾನಿಲ್ಲಿ ಭಾಷಣ ಮಾಡಲು ಬಂದಿಲ್ಲ. ಅಧಿಕಾರಿಗಳು ನೀಡುವ ಮಾಹಿತಿ ಮೇರೆಗೆ ಕಾರ್ಯನಿರ್ವಹಿಸುತ್ತೇನೆ. ಸುಮ್ಮನೆ ಮಾತನಾಡಿ ಹೋಗೋದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.