ಪುತ್ತೂರು, ಅ 18(SM): ಪುತ್ತೂರಿನ ಕೆದಿಲದ ಶ್ಯಾಮ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ದೋಷಾರೋಪಣೆಗೆ ಒಳಗಾಗಿರುವ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದೆ.
2014ರ ಆಗಸ್ಟ್ 31ರಂದು ಪ್ರಕರಣ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ 2018ರ ಅಕ್ಟೋಬರ್ 31ರಂದು ಮುಂದಿನ ವಿಚಾರಣೆ ನಿಗದಿ ಮಾಡಿದ್ದ ಪುತ್ತೂರು ನ್ಯಾಯಾಲಯ ಕಲ್ಲಡ್ಕ ಭಟ್ ಗೆ ಹಾಗೂ ಬೋನಂತಾಯ ಶಿವಶಂಕರ ಭಟ್ ವಿರುದ್ಧ ವಾರಂಟ್ ಜಾರಿಗೊಳಿಸಿತ್ತು. ಹಾಗೂ ರಾಘವೇಶ್ವರ ಸ್ವಾಮೀಜಿಗಳ ವಿರುದ್ಧ ಸಮನ್ಸ್ ಹೊರಡಿಸಿತ್ತು.
ಆದರೆ, ಇದೀಗ ಕೋರ್ಟ್ ಕಲ್ಲಡ್ಕ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ.