ರಾಯಚೂರು, ಅ20(SS): ಇತಿಹಾಸ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶ ಜಾರಿಗೆ ಕೇಂದ್ರವು ಕೇರಳದ ಮೇಲೆ ಒತ್ತಡ ಹೇರುವ ಮೂಲಕ ಜನರ ಮಧ್ಯೆ ಸಂಘರ್ಷಕ್ಕೆ ದಾರಿ ಮಾಡಿ ಕೊಟ್ಟಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಶಬರಿಮಲೆ ವಿವಾದದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರವು ತನ್ನ ನಿಲುವು ಸ್ಪಷ್ಟಪಡಿಸುವ ಕ್ರಮವಾಗಿ ಸುಗ್ರೀವಾಜ್ಞೆ ಜಾರಿಗೆ ಮುಂದಾಗಬೇಕು. ಶಬರಿಮಲೆ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರಕಾರ ತನ್ನ ಹೊಣೆಗಾರಿಕೆ ಮರೆತು ವರ್ತಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಶಬರಿಮಲೆ ವಿಚಾರವಾಗಿ ಜನರ ನಡುವೆ ಸಂಘರ್ಷಕ್ಕೆ ಅವಕಾಶ ಮಾಡಿಕೊಟ್ಟು ರಾಜಕೀಯ ಬೇಳೆ ಬೇಯಿಸಿಕೊಳ್ಳವುದು ತರವಲ್ಲ. ಕೇರಳ ಸರಕಾರ ಸುಪ್ರೀಂ ಕೋರ್ಟಿನ ಆದೇಶ ಜಾರಿಗೆ ಪ್ರಯಾಸಪಡುತ್ತಿದ್ದರೂ ಕೇಂದ್ರ ಸರಕಾರ ಮೌನ ವಹಿಸಿರುವುದು ಕೆಟ್ಟ ನಿರ್ಧಾರ ಎಂದವರು ತಿಳಿಸಿದರು.