ಮಂಗಳೂರು, ಅ27(SS): ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂಬ ಕೆಲ ಮುಸ್ಲಿಂ ನಾಯಕರ ಬೇಡಿಕೆಗೆ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಬೆಂಬಲ ಸೂಚಿಸಿದ್ದಾರೆ.
ಮುಸ್ಲಿಂ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ನಾಯಕರು ಸಭೆ ನಡೆಸಿ ತಮ್ಮ ಹಕ್ಕೊತ್ತಾಯ ಮಾಡಿರುವುದು ನ್ಯಾಯಯುತ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಮುಸ್ಲಿಂ ನಾಯಕರು ಸುಮ್ಮನೆ ಕುಳಿತುಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಇದಕ್ಕಾಗಿ ದೊಡ್ಡ ಹೋರಾಟ ನಡೆಸಿ. ಇಲ್ಲದಿದ್ದರೆ ನಿಮಗೆ ಟಿಕೆಟ್ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಡಬೇಕು ಎಂದು ಈ ಹಿಂದೆಯೂ ಮಾತುಗಳು ಕೇಳಿಬರುತ್ತಿತ್ತು. ಆದರೆ ಅದಕ್ಕೆ ಯಾವುದೇ ಮನ್ನಣೆ ಸಿಕ್ಕಿರಲಿಲ್ಲ. ಈ ಬಾರಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸ್ವತಃ ಪೂಜಾರಿಯವರು ತಿಳಿಸಿದ್ದಾರೆ.