ತಿರುವನಂತಪುರಂ, ಅ27(SS): ಸಾವಿರಾರು ವರುಷಗಳ ಇತಿಹಾಸವಿರುವ ಶಬರಿಮಲೆ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದ ತಿರುವನಂತಪುರದ ಸ್ವಾಮಿ ಸಂದೀಪಾನಂದ ಆಶ್ರಮದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಸಂದೀಪಾನಂದ ಆಶ್ರಮಕ್ಕೆ ಸೇರಿದ “ಸ್ವಾಮಿ ಸಂದೀಪಾನಂದ ಬಾಲಕಿಯರ ಶಾಲೆ”ಯ ಬಳಿ ಇದ್ದ 2 ಕಾರು ಮತ್ತು ಸ್ಕೂಟರ್ವೊಂದಕ್ಕೆ ಬೆಂಕಿ ಹಚ್ಚಿದ್ದು, ನಂತರ ಆಶ್ರಮದ ಮೇಲೂ ದಾಳಿ ನಡೆಸಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಶ್ರಮಕ್ಕೆ ತೆರಳಿ, ಘಟನೆಯನ್ನು ಖಂಡಿಸಿದ್ದಾರೆ. ಮಾತ್ರವಲ್ಲ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೈದ್ಧಾಂತಿಕವಾಗಿ ಒಂದು ವಿಷಯವನ್ನು ನಿರ್ವಹಿಸುವುದಕ್ಕೆ ಸಾಧ್ಯವಾಗದವರು ಈ ರೀತಿ ದೈಹಿಕ ಹಲ್ಲೆ ನಡೆಸುತ್ತಾರೆ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವುದಕ್ಕೆ ನಾವು ಬಿಡುವುದಿಲ್ಲ. ಯಾರಲ್ಲಿ ಸಹಿಷ್ಣು ಬುದ್ಧಿ ಇಲ್ಲವೋ ಅವರು ಆಶ್ರಮದ ಮೇಲೆ ದಾಳಿ ನಡೆಸಿದ್ದಾರೆ ಎಂದು ವಿಜಯನ್ ತಿಳಿಸಿದ್ದಾರೆ.