ವಿಟ್ಲ, ಅ 29(SM): ಶಾರ್ಟ್ ಸರ್ಕಿಟ್ನಿಂದ ಇಲೆಕ್ಟ್ರಾನಿಕ್ಸ್ ಅಂಗಡಿ ಬೆಂಕಿಗಾಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಶಾಂತಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ ಯಾನೆ ರಹೀಂ ಎಂಬವರಿಗೆ ಸೇರಿದ ಡಿಲೆಕ್ಸ್ ಎಂಬ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಅಂಗಡಿ ಕುಡ್ತಮುಗೇರು ಎಂಬಲ್ಲಿ ಕಾರ್ಯಾಚರಿಸುತ್ತಿದೆ. ಸೋಮವಾರ ಸಂಜೆ ಮಾಲೀಕ ಹೊರಗಡೆ ತೆರಳಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಇದರಿಂದ ಅಂಗಡಿಯಲ್ಲಿದ್ದ ಒಂದು ಲಕ್ಷ ರೂ. ನಗದು, ಬೆಳೆಬಾಳುವ ಉಪಕರಣಗಳಾದ ಕಂಪ್ಯೂಟರ್, ಫರ್ನಿಚರ್ ಮೊದಲಾದ ವಸ್ತುಗಳು ಸಂಪೂರ್ಣವಾಗಿ ಭಸ್ಮಗೊಂಡಿದೆ.
ಘಟನೆ ನಡೆಯುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.