ಬೆಂಗಳೂರು, ಅ 30 (MSP): ದ. ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖಾಸಗಿ ವಸತಿ ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿನಿಯರ ಅಸಹಜ ಸಾವು ಪ್ರಕರಣದ ತನಿಖಾ ವರದಿಯನ್ನು ಸರ್ಕಾರ ಹೈಕೋರ್ಟ್ ಗೆ ಸಲ್ಲಿಸಿದೆ.
ವಿದ್ಯಾರ್ಥಿನಿಯರಾದ ಕಾವ್ಯಾ ಪೂಜಾರಿ, ರಚನಾ ಮಂಜುನಾಥ್ ಅಸಹಜ ಸಾವು ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸುವಂತೆ ಕೋರಿ ಆ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ. ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠಕ್ಕೆ ಸರಕಾರಿ ವಕೀಲರು ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಿದ್ದಾರೆ. ವರದಿ ಸ್ವೀಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಒಂದು ವಾರದ ಅವಧಿಗೆ ಮುಂದೂಡಿದೆ.