ನವದೆಹಲಿ,ಅ 31 (MSP): ಸುಪ್ರೀಂ ಕೋರ್ಟ್ ತೀರ್ಪು ವಿಳಂಬವಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿ ರಾಮ ಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಹೊರಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಈ ಸಂಬಂಧ ಸಾಧು ಸಂತರ ನಿಯೋಗವೊಂದು ಈಗಾಗಲೇ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ. ಪ್ರಧಾನಿ ಭೇಟಿ ಮಾಡಲು ಸ್ವಾಮೀಜಿಗಳ ನಿಯೋಗ ನಿರ್ಧರಿಸಿದರೆ ನಾನು ಹೋಗುಲು ಸಿದ್ದ ಎಂದು ತಿಳಿಸಿದರು. ಸುಗ್ರೀವಾಜ್ಞೆ ಹೊರಡಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಮೋದನೆ ಪಡೆದು ಆದಷ್ಟು ಬೇಗ ಮಂದಿರ ನಿರ್ಮಾಣಕ್ಕೆ ಮುಂದಾಗಬೇಕೆಂಬುದು ನಮ್ಮ ಅಭಿಲಾಷೆ ಎಂದರು.