ಬೆಂಗಳೂರು, ನ06(SS): ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ದಾಖಲೆ ರೀತಿಯಲ್ಲಿ ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆ. ಶಾಂತ ಕಡಿಮೆ ಮತಗಳನ್ನು ಪಡೆದು ಸೋಲಿಗೆ ಶರಣಾಗಿದ್ದಾರೆ.
ಮಂಡ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಅಭ್ಯರ್ಥಿ ಎಲ್. ಆರ್. ಶಿವರಾಮೇಗೌಡ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ ಸೋಲಿಗೆ ಶರಣಾಗಿದ್ದಾರೆ.
ರಾಮನಗರದಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದರೆ, ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೊನೆಗೆ ಕಾಂಗ್ರೆಸ್ ಸೇರಿದ ಎಲ್. ಚಂದ್ರಶೇಖರ್ 10,249 ಮತಗಳನ್ನು ಪಡೆದು ಸೋಲಿಗೆ ಶರಣಾಗಿದ್ದಾರೆ.
ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮೇಗೌಡ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣೀ ಸೋಲಿಗೆ ಶರಣಾಗಿದ್ದಾರೆ.
ಮಲೆನಾಡು ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗಿಂತ ಮುನ್ನಡೆ ಕಾಯ್ದುಕೊಂಡಿದ್ದು, ಫಲಿತಾಂಶ ಪ್ರಕಟಗೊಂಡಿಲ್ಲ.