ಮಂಗಳೂರು, ನ10(SS): ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ರಾಜ್ಯಾದ್ಯಂತ ಇಂದು ಪ್ರತಿಭಟನೆ ನಡೆಯುತ್ತಿದ್ದು. ವ್ಯಾಪಕ ವಿರೋಧ ವ್ಯಕ್ತವಾಗಿದೆ.
ನಗರದಲ್ಲಿ ಟಿಪ್ಪು ಜಯಂತಿಗೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷದ್, ಬಜರಂಗದಳದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮಾತ್ರವಲ್ಲ, ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ಟಿಪ್ಪು ಸುಲ್ತಾನ್ ಸೇರಿದಂತೆ ಸಿದ್ದರಾಮಯ್ಯರಿಗೆ ಧಿಕ್ಕಾರ ಹಾಗು ಗೃಹಸಚಿವರಿಗೆ ಧಿಕ್ಕಾರ ಕೂಗಿ ಟಿಪ್ಪು ಜಯಂತಿ ವಿರುಧ್ದ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದೆ. ಮಾತ್ರವಲ್ಲ ಕರಿ ಪತಾಕೆ ಪ್ರದರ್ಶಿಸಿ ಟಿಪ್ಪು ಜಯಂತಿ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೇರಿದಂತೆ ವಿಶ್ವ ಹಿಂದೂ ಪರಿಷದ್, ಬಜರಂಗದಳದ 70ಕ್ಕೂ ಮಿಕ್ಕಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಮಾತ್ರವಲ್ಲ, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಕೆಲವಡೆ ನಿಷೇಧಾಜ್ಞೆ ಜಾರಿಯಾಗಿದೆ.