ಉಡುಪಿ, ನ 10(SM): ಉಡುಪಿ ಜಿಲ್ಲಾಡಳಿತದ ವತಿಯಿಂದ ಮಣಿಪಾಲದ ಡಿಸಿ ಕಚೇರಿಯಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಅಡ್ಡಿಯನ್ನುಂಟು ಮಾಡಲು ಮುಂದಾದ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾದಂತಹ ಕಾರ್ಯಕ್ರಮವನ್ನು ರದ್ದು ಪಡಿಸುವಂತೆ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಆಗ್ರಹಿಸಿತ್ತು. ಅಲ್ಲದೆ ಇಂದು ಕಾರ್ಯಕ್ರಮ ನಡೆಯುತ್ತಿದ್ದಂತೆ ಅಡ್ಡಿಯನ್ನುಂಟು ಮಾಡಲು ಮುನ್ನುಗ್ಗಿದ್ದ ಸುಮಾರು ೨೦ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಬಳಿಕ ಜಿಲ್ಲಾಡಳಿತ ಕಚೇರಿಯ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.