ಪುತ್ತೂರು, ನ 10(SM): ನೂತನ ಕೋರ್ಟ್ ಕಟ್ಟಡಕ್ಕೆ ಸುಪ್ರೀಂಕೋರ್ಟ್ ನ್ಯಾಯಾಧೀಶ ಎಸ್.ಅಬ್ದುಲ್ ನಜೀರ್ ಶಿಲಾನ್ಯಾಸ ನೆರವೇರಿಸಿದರು.
ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅತ್ಯಂತ ಕ್ಲಿಷ್ಟಕರವಾದ ವಾತಾವರಣದಿಂದ ಒಳ್ಳೆಯ ವಾತಾವರಣಕ್ಕೆ ಹೋಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಪುತ್ತೂರು ನಗರದ ಹೊರವಲಯದಲ್ಲಿರುವ ಆನೆಮಜಲಿನಲ್ಲಿ ಕೋರ್ಟ್ ಕಟ್ಟಡವನ್ನು ನಿರ್ಮಿಸಲು ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಸುಮಾರು 50 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣಗೊಳ್ಳಲಿದೆ. ಮೂರು ವರ್ಷಗಳಲ್ಲಿ ಈ ಕಾಮಗಾರಿಯನ್ನು ಮುಗಿಸುವ ಯೋಜನೆಯನ್ನು ಹೊಂದಲಾಗಿದೆ.