ಬೀದರ್, ನ 11(SM): ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಪ್ರಕರಣದಲ್ಲಿ ರಾಜ್ಯ ಸರಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆಯ ಉದ್ಘಾಟನೆಗೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಜನಾರ್ದನಾ ರೆಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.
ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಾಗಿ ಸತ್ಯಾಂಶ ಹೊರಗೆ ಬರಲಿದೆ. ಅದಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಟೀಕೆ ಮಾಡುವುದಿಲ್ಲ ಎಂದಿದ್ದಾರೆ. ಇನ್ನು ಟಿ.ಬಿ. ಜಯಚಂದ್ರರ ವಿವಾದಾತ್ಮಕ ಹೇಳಿಕೆ ಕುರಿತು ಮಾತನಾಡಿ, ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಜಯಚಂದ್ರ ಕ್ಷಮೆ ಕೇಳಬೇಕು ಎಂದಿದ್ದಾರೆ.