ಪುಂಜಾಲಕಟ್ಟೆ,ನ 14 (MSP): ಮಕ್ಕಳ ದಿನಾಚರಣೆ ದಿನದಂದೇ ವಿದ್ಯಾರ್ಥಿನಿಯೊಬ್ಬಳು ತನ್ನ ಬದುಕನ್ನೇ ಕೊನೆಗಾಣಿಸಿದ ಮನಕಲಕುವ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಕು.ಶ್ರದ್ದಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಮಣ್ಣೂರು ನಿವಾಸಿಯಾಗಿದ್ದ ಕು.ಶ್ರದ್ದಾ (13) ಪುಂಜಾಲಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದರು. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.