ವಿಟ್ಲ, ನ 14(SM): ಕೇರಳಕ್ಕೆ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ವಿಟ್ಲ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೊಡಿಂಬಾಡಿಯ ಪ್ರವೀಣ್ ನಾಯಕ್ ಹಾಗೂ ಬೇರಿಕೆಯ ಜಗದೀಶ್ ಹೆಗ್ಡೆ ಬಂಧಿತರು. ಆರೋಪಿಗಳು ಮಹೀಂದ್ರ ಜೀಪಿನಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದರು. ಈ ಬಗ್ಗೆ ವಿಟ್ಲ ಠಾಣೆಗೆ ಮಾಹಿತಿ ಲಭಿಸಿತ್ತು. ಅದರಂತೆ ಕಾರ್ಯಾಚರಣೆ ನಡೆಸಿದ ಎಸ್ ಐ ಯಲ್ಲಪ್ಪ ಹಾಗೂ ತಂಡದವರು, ಗೋಸಾಗಾಟ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.