ಚೆನ್ನೈ, ನ 15(SM): ಬಂಗಾಳ ಕೊಲ್ಲಿಯಲ್ಲಿ ಉದ್ಭವವಾಗಿರುವ 'ಗಜ' ಚಂಡಮಾರುತ ಇದೀಗ ತಮಿಳುನಾಡು ಮತ್ತು ಪುದುಚೆರಿ ತೀರ ಪ್ರದೇಶಕ್ಕೆ ಅಪ್ಪಳಿಸಿದೆ. ಗಂಟೆಗೆ 80ರಿಂದ 90 ಕಿ.ಮೀ. ವೇಗದಲ್ಲಿ ಪಂಬನ್ -ಕಡಲೂರು ತೀರ ಪ್ರವೇಶಿಸಿದೆ. ಕೆಲವೊಂದು ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಹೈ-ಅಲರ್ಟ್ ಘೋಷಣೆ ಮಾಡಿದೆ.
ಚಂಡಮಾರುತದಿಂದ ಕಡಲೂರ್ನಲ್ಲಿ ಈಗಾಗಲೇ ಮಳೆಯ ಅಬ್ಬರ ಶುರುವಾಗಿದೆ. ಕೆಲವೊಂದು ಪ್ರದೇಶಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇನ್ನು ಮುಂಜಾಗೃತ ಕ್ರಮವಾಗಿ ಏಳು ಜಿಲ್ಲೆಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪರಿಸ್ಥಿತಿ ನಿರ್ವಹಣೆಗಾಗಿ ಸುಮಾರು 30 ಸಾವಿರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.