ಮಂಗಳೂರು,ನ 16 (MSP): ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರ ಅಮಾನತು ಆದೇಶವನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ವಾಪಾಸ್ ಪಡೆದಿದ್ದು, ತಕ್ಷಣದಿಂದ ಜಾರಿಯಾಗುವಂತೆ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದೆ.
ಯುವ ಕಾಂಗ್ರೆಸ್ ನ 10 ಜಿಲ್ಲಾಧ್ಯಕ್ಷರು ಮತ್ತು 8 ಮಂದಿ ರಾಜ್ಯ ಪದಾಧಿಕಾರಿಗಳು ಪಕ್ಷದ ಸಭೆಗೆ ಹಾಜರಾಗದ ಹಿನ್ನಲೆಯಲ್ಲಿ ಅವರಿಗೆ ಕಾರಣ ಕೇಳಿ, ನೋಟೀಸ್ ಜಾರಿ ಮಾಡಲಾಗಿತ್ತು. ಈ ನೋಟೀಸ್ ಗೆ ಉತ್ತರಿಸದ ಕಾರಣ ನ.5 ರಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಆರ್. ರವೀಂದ್ರದಾಸ್ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಈಗ ಮಿಥುನ್ ರೈ ಹಾಗೂ ಇತರ ಮೂವರು ಪದಾಧಿಕಾರಿಗಳ ಅಮಾನತು ಆದೇಶವನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಹಿಂದಕ್ಕೆ ಪಡೆದಿದೆ. ಮಿಥುನ್ ರೈ ದಿಲ್ಲಿಗೆ ತೆರಳಿ ರಾಷ್ಟ್ರೀಯ ನಾಯಕರಿಗೆ ಸಭೆಗೆ ಗೈರುಹಾಜರಾದ ಬಗ್ಗೆ ಮನವರಿಕೆ ಮಾಡಿದ್ದರು.