ಮಂಗಳೂರು, ನ 17(SM): ಕಾಲೇಜು ವಿದ್ಯಾರ್ಥಿಯೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರ ವಲಯ ಸುರತ್ಕಲ್ ಎನ್ ಐಟಿಕೆ ಕಾಲೇಜಿನಲ್ಲಿ ನಡೆದಿದೆ. ಬಿಟೆಕ್ ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಆನಂದ್ ಪಾಠಕ್(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಆನಂದ್ ಗೆ ಹಾಜರಾತಿ ಕೊರತೆ ಇತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಶಿಕ್ಷಕರು ಆತನನ್ನು ಅಪಮಾನಗೈದಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿದೆ. ಅಲ್ಲದೆ, ನವಂಬರ್ 19ರಿಂದ ಆರಂಭವಾಗುವ ಪರೀಕ್ಷೆಗಳಿಗೆ ಅವಕಾಶವನ್ನು ಕಾಲೇಜು ನೀಡಿರಲಿಲ್ಲ. ಇದರಿಂದಾಗಿ ನೊಂದ ವಿದ್ಯಾರ್ಥಿ ಕಾಲೇಜು ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಇನ್ನು ಕಾಲೇಜು ವಿದ್ಯಾರ್ಥಿಯ ವಿಚಾರದಲ್ಲಿ ಕೈಗೊಂಡ ನಿರ್ಧಾರದಿಂದಾಗಿ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ಕೂಡ ನಡೆಸಿದ್ದಾರೆ.
ಘಟನೆಯ ಕುರಿತಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.