ಬೆಂಗಳೂರು, ನ 22(MSP): ಎಚ್.ಡಿ ಕುಮಾರಸ್ವಾಮಿ ಅವರು ನೀಡಿದ್ದ "ನಾಲ್ಕು ವರ್ಷ ಎಲ್ಲಿ ಮಲಗಿದ್ದೆ ತಾಯಿ," ಎಂಬ ಹೇಳಿಕೆಯೂ ರೈತ ಮಹಿಳೆಯ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಅವರ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಕಾರ್ಮಿಕ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ್ ಎಂಬುವರು ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.
ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಮಲ್ಲಿಕಾರ್ಜುನ್ ಅವರು, ಮುಖ್ಯಮಂತ್ರಿ ವಿರುದ್ಧ ಆನ್ಲೈನ್ ಮೂಲಕ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಮಹಿಳಾ ಆಯೋಗ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ತಕ್ಷಣ ಸಿಎಂ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಉನ್ನತ ಸ್ಥಾನವಾದ ಮುಖ್ಯಮಂತ್ರಿ ಕುರ್ಚಿಯನ್ನು ಅಲಂಕರಿಸಿರುವ ಕುಮಾರಸ್ವಾಮಿಯೂ, ರೈತ ಮಹಿಳೆಯನ್ನು ಅವಹೇಳನಕಾರಿಯಾಗಿ ನಿಂದಿಸಿರುವುದು, ಇಡೀ ರೈತರಿಗೆ ಮಾಡಿದ ಅಪಮಾನವಾಗಿದೆ. ನಮ್ಮ ಮನವಿ ಪರಿಗಣಿಸಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು'' ಎಂದು ಒತ್ತಾಯಿಸಿದರು.