ಪುತ್ತೂರು, ನ 23(MSP): ಕೊನಾಲು ಗ್ರಾಮದ ಆರ್ಲದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ನ.೨೩ರ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟ ಬೈಕ್ ಸವಾರರನ್ನು ಜಗದೀಶ್ ಎಂದು ಗುರುತಿಸಲಾಗಿದೆ. ಮೃತರು ವೃತ್ತಿಯಲ್ಲಿ ಟೈಲರ್ ಆಗಿದ್ದು ಕೊನಾಲು ಗ್ರಾಮದ ಕಡೆಂಬಿಲ ನಿವಾಸಿಯಾಗಿದ್ದಾರೆ. ಇವರು ನೆಲ್ಯಾಡಿಯಿಂದ ಮನೆಗೆ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ.
.jpg)
.jpg)
.jpg)
.jpg)
ಇನ್ನು ಅಪಘಾತದಿಂದ ಗ್ಯಾಸ್ ಟ್ಯಾಂಕರ್ ಉರುಳಿಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಧಾವಿಸಿದ್ದಾರೆ.