ಮಂಡ್ಯ, ನ 23(SM): ರೈತರು ಅಪಪ್ರಚಾರಗಳಿಗೆ ಕಿವಿಗೊಡಬಾರದು. ರಾಜ್ಯ ಸರಕಾರ ಸಾಲಮನ್ನಾ ಮಾಡುವುದು ಖಂಡಿತ ಎಂದು ಸಿಎಂ ಕುಮಾರಸ್ವಾಮಿ ಅವರು ಮತ್ತೊಮ್ಮೆ ರೈತರಿಗೆ ಭರವಸೆ ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಸಿಎಂ, ಸಾಲ ಮನ್ನಾ ಬಗ್ಗೆ ರೈತರಿಗೆ ಆತಂಕ ಬೇಡ. 45 ಸಾವಿರ ಕೋಟಿ ಸಾಲ ಮನ್ನಾಕ್ಕೆ ಸಿದ್ಧತೆ ನಡೆಸಲಾಗಿದೆ. ಈ ತಿಂಗಳು ಸಹಕಾರಿ ಬ್ಯಾಂಕ್ ಮಾಹಿತಿ ಆಧರಿಸಿ 9455 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಮುಂದಿನ ತಿಂಗಳಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯ ಸಹಕಾರಿ ಬ್ಯಾಂಕುಗಳಲ್ಲಿನ 550 ಕೋಟಿ ರೂಪಾಯಿ ಸಾಲ ಮನ್ನಾ ಆಗುತ್ತಿದೆ. ಮುಂದಿನ ಬಜೆಟ್ನಲ್ಲಿ ಖಾಸಗಿ ಬ್ಯಾಂಕುಗಳಿಗೆ ರೈತರ ಸಾಲಮನ್ನಾದ ಮೊದಲ ಕಂತು 25,000 ಕೋಟಿ ರೂಪಾಯಿಯನ್ನು ಮೀಸಲಿಡಲಿಡಲಾಗಿದೆ ಯಾವ ರೈತರೂ ಸಹ ಆತಂಕಕ್ಕೆ ಒಳಗಾಗಬಾರದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.