ಮಂಗಳೂರು, ನ 25(SM): ಮಾಜಿ ಶಾಸಕ ನಟ ಅಂಬರೀಶ್ ಅವರ ನಿಧನಕ್ಕೆ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೂಡುಬಿದಿರೆ ಹಾಗೂ ಕಡಬ ತಾಲೂಕು ಉದ್ಘಾಟನಾ ಕರ್ಯಕ್ರಮದ ಹಿನ್ನೆಲೆ ಮಂಗಳೂರಿಗೆ ಆಗಮಿಸಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಅಂಬರೀಶ್ ಅವರು ಚಿತ್ರ ರಂಗದಲ್ಲಿ ರೆಬಲ್ ಸ್ಟಾರ್ ಆಗಿ ಪ್ರಸಿದ್ಧಿಯನ್ನು ಪಡೆದಿದ್ದರು. ಅಲ್ಲದೆ, ರಾಜಕೀಯ ಕ್ಷೇತ್ರಕ್ಕೆ ಎಂಟ್ರಿಕೊಂಟ್ಟು ಹತ್ತು ಹಲವು ಜನಪರ ಕೆಲಸ ಕಾರ್ಯಗಳನ್ನು ನಡೆಸಿದ್ದರು. ನಮ್ಮೆಲ್ಲರ ನೆಚ್ಚಿನ ಮಂಡ್ಯದ ಗಂಡು ನಮ್ಮನ್ನು ಬಿಟ್ಟು ಅಗಲಿದ್ದಾರೆ.
ಅಂಬರೀಶ್ ಅವರ ನಿಧನ ರಾಜಕೀಯಕ್ಕೆ ಮತ್ತು ಚಿತ್ರರಂಗಕ್ಕೆ ತುಂಬಾಲಾರದ ನಷ್ಟವನ್ನುಂಟು ಮಾಡಿದೆ. ಅಂಬರೀಶ್ ಆತ್ಮಕ್ಕೆ ಭಗವಂತ ಶಾಂತಿಯನ್ನು ಕರುಣಿಸಲಿ ಎಂದು ಮಂಗಳೂರಿನಲ್ಲಿ ಸಚಿವ ದೇಶಪಾಂಡೆ ಸಂತಾಪ ವ್ಯಕ್ತಪಡಿಸಿದ್ದಾರೆ.