ಬೆಳ್ತಂಗಡಿ, ನ 28(SM): ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಗೆ ತಾಲೂಕು ಕಂದಾಯ ಇಲಾಖೆ ಹಾಗೂ ಜಿಲ್ಲಾ ಭೂ ಹಾಗೂ ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನವಂಬರ್ ೨೮ರ ಬುಧವಾರದಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗುಂಪಲಾಜೆಯಲ್ಲಿ ನಡೆದಿದೆ.
ದಾಳಿ ನಡೆಸಿದ ಅಧಿಕಾರಿಗಳು 2 ಲಾರಿಗಳು ಹಾಗೂ ಕಪ್ಪು ಕಲ್ಲುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಕಟ್ಟಡ ನಿರ್ಮಾಣಕ್ಕಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿ ವಾಹನ ಹಾಗೂ ಕಲ್ಲುಗಳು ಸೇರಿದಂತೆ ಇತರ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಗಣಿ ಇಲಾಖೆಯವರು ಪ್ರಕರಣ ದಾಖಲಿಸಿಕೊಂಡಿರುವುದಲ್ಲದೆ ಕಟ್ಟಡ ನಿರ್ಮಾಣ ಸ್ಥಗಿತಕ್ಕೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.