ಮಂಗಳೂರು, ನ 30(SM): ತೋಟಬೆಂಗರೆಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಿದ ಪೊಲೀಸ್ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಬುಧವಾರದಂದು 1 ಲಕ್ಷ ರೂಪಾಯಿ ಬಹುಮಾನ ವಿತರಿಸಿದರು.
ನವಂಬರ್ 18ರಂದು ಪ್ರಕರಣ ನಡೆದಿದ್ದು, ಮರುದಿನವೇ ಮಂಗಳೂರು ನಗರ ಠಾಣಾ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನೆಲೆ 1 ಲಕ್ಷ ಬಹುಮಾನ ನೀದುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದರು. ಅದರಂತೆ 1 ಲಕ್ಷ ರೂಪಾಯಿ ಚೆಕ್ ನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಖಾದರ್ ನಗರ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಅವರಿಗೆ ಹಸ್ತಾಂತರಿಸಿದ್ದಾರೆ.
ಪ್ರಕರಣ ನಡೆದ ತಕ್ಷಣ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಮಾರ್ಗದರ್ಶನದಲ್ಲಿ, ಡಿಸಿಪಿ ಉಮಾ ಪ್ರಶಾಂತ್, ಹನುಮಂತರಾಯ ಸೇರಿದಂತೆ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು.
ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.