ಹಾಸನ ಡಿ 01(SM): ಕಳೆದ 25 ವರ್ಷಗಳಿಂದ ಮೂಲೆಗುಂಪಾಗಿದ್ದ ಮೇಕೆದಾಟು ಯೋಜನೆ ಜಾರಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನ ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಆಧುನಿಕ ಕೃಷಿ ಪದ್ದತಿ ಅಳವಡಿಕೆ ಬಗ್ಗೆ ತಾವು 12 ವರ್ಷಗಳ ಹಿಂದೆಯೇ ಚಿಂತಿಸಿದ್ದು ಈಗಾಗಲೇ ಇಸ್ರೇಲ್ ಮಾದರಿಯಲ್ಲಿ ತಂತ್ರಜ್ಞಾನಗಳ ಬಳಕೆಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿನೂತನ ಕ್ತಮಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.
ಜೈವಿಕ ಇಂಧನ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ, ಪ್ರತಿ ಜಿಲ್ಲೆಗೆ ಇಬ್ಬರಂತೆ 60 ತಜ್ಞ ರೈತರ ಸಮಿತಿ ರಚಿಸಲಾಗಿದೆ, ಅವರೊಂದಿಗೆ ಚರ್ಚಿಸಿ ಹೊಸ ಕೃಷಿ ಯೋಜನೆಗಳ ಜಾರಿಗೆ ತರಲು ಕ್ರಮವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಸಹಭಾಗಿತ್ವ ಮತ್ತು ಸಹಕಾರ ರಾಜ್ಯದ ಸಮಗ್ರ ಅಭಿವೃದ್ಧಿ ತಮ್ಮ ಆದ್ಯತೆಯಾಗಿದ್ದು ಎಲ್ಲರನ್ನು ಒಳಗೊಂಡ ಸುಸ್ಥಿರ ಅಭಿವೃದ್ಧಿಯತ್ತ ಗಮನ ಹರಿಸಲಾಗಿದೆ. ಇದಕ್ಕೆ ಕೇಂದ್ರ ಸರ್ಕಾರದ ಸಹಭಾಗಿತ್ವ ಮತ್ತು ಸಹಕಾರವನ್ನು ಕೋರುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.