ಮಂಗಳೂರು, ಡಿ 04(SM): ಕಲೆ, ಸಾಹಿತ್ಯ, ಸಾಂಸ್ಕೃತಿ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ನೀಡಲಾಗುವ ಪ್ರತಿಷ್ಠಿತ ಸಂದೇಶ ಪ್ರಶಸ್ತಿ-2019 ಘೋಷಣೆಯಾಗಿದೆ. ಈ ಬಾರಿಯ ಸಂದೇಶ ಪ್ರಶಸ್ತಿ ಐದು ಮಂದಿಗೆ ಪ್ರದಾನ ಮಾಡಲಾಗುತ್ತಿದೆ ಎಂದು ಸಂದೇಶ ಪ್ರತಿಷ್ಠಾನದ ನಿರ್ದೇಶಕ ರೆ. ಫಾ. ನೆಲ್ಸನ್ ಪ್ರಕಾಶ್ ಡಿ ಅಲ್ಮೆಡಾ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಶಿಕ್ಷಣ ಪ್ರಶಸ್ತಿಯನ್ನು ಬಿ.ಎಂ. ರೋಹಿಣಿ, ಮಾಧ್ಯಮ ಪ್ರಶಸ್ತಿಯನ್ನು ಬಿ.ಎಂ. ಹನೀಫ್, ಕೊಂಕಣಿ ಸಂಗೀತ ಪ್ರಶಸ್ತಿಯನ್ನು ಬೆನ್ ಬ್ರಿಟ್ಟೋ, ಕಲಾ ಪ್ರಶಸ್ತಿಯನ್ನು ಬಳ್ಳಾರಿಯ ಮಂಜಮ್ಮ ಜೋಗತಿ ಮತ್ತು ಕನ್ನಡ ಸಾಹಿತ್ಯ ಪ್ರಶಸ್ತಿಗೆ ಪ್ರಸನ್ನ ಹೆಗ್ಗೋಡು ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ಸಂದೇಶ ವಿಶೇಷ ಪ್ರಸ್ತಿಯನ್ನು ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಸ್ನೇಹಸದನ್ ಮತ್ತು ಜೀವದಾನ್ ಸಂಸ್ಥೆಗಳಿಗೆ ನೀಡಲಾಗುತ್ತದೆ ಎಂದರು.
ಇನ್ನು ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 22ರಂದು ಜರುಗಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಅ|ವಂ| ಹೆನ್ರಿ ಡಿಸೋಜಾ ವಹಿಸಲಿದ್ದಾರೆ. ಮಂಗಳೂರು ಬಿಷಪ್ ವಂ| ಡಾ| ಪೀಟರ್ ಪಾವ್ಲ್ ಸಲ್ಡಾನಾ, ಉಡುಪಿ ಬಿಷಪ್ ಅ|ವಂ| ಜೆರಾಲ್ಡ್ ಐಸಾಕ್ ಲೋಬೊ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಎಂದರು.