ಮಹಾರಾಷ್ಟ, ಡಿ 07 ( MSP): ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕಾರ್ಯಕ್ರಮವೊಂದರ ವೇದಿಕೆಯಲ್ಲೇ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಹ್ಮದ್ನಗರದಲ್ಲಿರುವ ಮಹಾತ್ಮ ಪುಲೆ ಕೃಷಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೇಂದ್ರ ಸಚಿವರು ಕುಳಿತಲ್ಲಿಯೇ ಕುಸಿದು ಬಿದ್ದಿದ್ದಾರೆ.
ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರಗೀತೆಗೆ ವಂದನೆ ಸಲ್ಲಿಸಲು ಎದ್ದು ನಿಂತಿದ್ದ ಗಡ್ಕರಿ ಕೆಲ ಹೊತ್ತಿನ ನಂತರ ಕುಸಿದಿದ್ದಾರೆ. ಗಡ್ಕರಿ ಲೋ ಬಿಪಿಯಿಂದ ಬಳಲಿ ಬಿದ್ದಿದ್ದಾರೆ ಎನ್ನುವ ಮಾಹಿತಿ ಸದ್ಯ ಲಭ್ಯವಾಗಿದೆ. ಗಡ್ಕರಿ ಬಿದ್ದ ಕೂಡಲೇ ವೈದ್ಯರು ಸ್ಥಳಕ್ಕೆ ಧಾವಿಸಿ ಚಿಕಿತ್ಸೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಹಾಜರಿದ್ದ ಇತರೆ ಗಣ್ಯರು ಮತ್ತು ಪೊಲೀಸ್ ಸಿಬ್ಬಂದಿ ಗಡ್ಕರಿ ಕುಸಿಯುವುದನ್ನು ಕಂಡ ತಕ್ಷಣ ಹಿಡಿದುಕೊಳ್ಳಲು ಮುಂದಾಗಿದ್ದಾರೆ.