ಮಂಗಳೂರು, ಡಿ08(SS): ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡು ವಿದೇಶದಲ್ಲಿದ್ದ ಆರೋಪಿಯೋರ್ವನನ್ನು ಮಂಗಳೂರು ಉತ್ತರ ಉಪ ವಿಭಾಗದ ರೌಡಿ ನಿಗ್ರಹದಳ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಉಚ್ಚಿಲ ನಿವಾಸಿ ಮಹಮ್ಮದ್ ರಫೀಕ್ (38) ಬಂಧಿತ ಆರೋಪಿ.
ಮಹಮ್ಮದ್ ರಫೀಕ್ 2008ರಲ್ಲಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಂಚನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ. ಇದೀಗ ಮಂಗಳೂರು ಉತ್ತರ ಉಪ ವಿಭಾಗದ ರೌಡಿ ನಿಗ್ರಹದಳ ಪೊಲೀಸರು ಈತನನ್ನು ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.