ಮಂಗಳೂರು, ಡಿ 09( MSP): ನಗರದ ಲೇಡಿಗೋಷನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಡಿ 9 ರ ಭಾನುವಾರ ಅಗ್ನಿ ಆಕಸ್ಮಿಕ ಸಂಭವಿಸಿ ಕ್ಷಣ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣ ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಆಗ್ನಿಶಾಮಕ ದಳ ಐಸಿಯು ನಲ್ಲಿದ್ದ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಕ್ಕಳನ್ನು ರಕ್ಷಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಶಾರ್ಟ್ ಸರ್ಕಿಟ್ಯೂನಿಂದ ಬೆಂಕಿ ಹತ್ತಿಕೊಂಡಿದೆ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಬೆಂಕಿ ಅವಘಡದ ಪರಿಣಾಮ ಗ್ಯಾಸ್ ಕೂಡಾ ಸೋರಿಕೆಯಾಗಿದೆ. ಸದ್ಯ ಪಾಂಡೇಶ್ವರ ಅಗ್ನಿ ಶಾಮಕ ದಳ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದು, ಗ್ಯಾಸ್ ಸೋರಿಕೆಯನ್ನು ದುರಸ್ಥಿಗೊಳಿಸಿದ್ದಾರೆ. ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಧಾವಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.