ನವದೆಹಲಿ, ಡಿ10 (MSP): ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಉದ್ದೇಶಿಸಿ ಪರೋಕ್ಷವಾಗಿ ’ವಿಧವೆ’ ಎಂದು ಟೀಕಿಸಿದ್ದಕ್ಕೆ ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮೋದಿ ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯೊಂದರಲ್ಲಿ ಅವೇಶಭರಿತವಾಗಿ ಪರೋಕ್ಷವಾಗಿ ಸೋನಿಯಾ ಗಾಂಧಿನ್ನು 'ವಿಧವೆ' ಎಂದು ಹೇಳಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಪ್ರಧಾನಿ ಮಾತಿನ ಭರದಲ್ಲಿ ’ಪಿಂಚಣಿ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ ಕಾಂಗ್ರೆಸ್ನ ಆ ವಿಧವೆ ಯಾರು?’ ಎಂದು ಪರೋಕ್ಷವಾಗಿ ಸೋನಿಯಾ ಗಾಂಧಿಗೆ ಟಾಂಗ್ ಕೊಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರತಿಪಕ್ಷದವರನ್ನು ಟೀಕಿಸುವ ಭರದಲ್ಲಿ ಮೋದಿ ಅವರು ಸ್ತ್ರೀ ಕುಲವನ್ನೇ ಅವಮಾನ ಮಾಡಿದ್ದಾರೆ. ತನ್ನ ತಾಯಿ ಕೂಡಾ ವಿಧವೆ ಎನ್ನುವುದನ್ನು ಮರೆತಿರುವ ಮೋದಿಯವರು ದ್ವೇಷಾಸೂಯೆಯ ರಸಾತಲ ತಲುಪಿದ್ದಾರೆ. ಅವರು ಇಂತಹ ಮಾನಸಿಕ ಅಸ್ವಸ್ಥತೆಯಿಂದ ಹೊರಬರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಿದ್ದರಾಮಯ್ಯ ಶನಿವಾರ ಟ್ವೀಟ್ ಮಾಡಿದ್ದರು.
ಕಾಂಗ್ರೆಸ್ ಆನೇಕ ನಾಯಕರು ಪ್ರಧಾನಿ ಅವರ ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅಲ್ಲದೆ ‘ವಿಧವೆ’ ಹೇಳಿಕೆ ಪ್ರಧಾನಿ ಅವರ ಹುದ್ದೆ, ಘನತೆಗೆ ತಕ್ಕುದಲ್ಲ ಅಭಿಪ್ರಾಯಪಟ್ಟಿದ್ದಾರೆ.