ನವದೆಹಲಿ ಡಿ, 11(MSP):ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಹುದ್ದೆಗೆ ಹಠಾತ್ ರಾಜೀನಾಮೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಮಂತ್ರಿ ಡಾ.ಮನ್ ಮೋಹನ್ ಸಿಂಗ್ ಇದರಿಂದ ರಾಷ್ಟ್ರದ ಆರ್ಥಿಕತೆ ಮೇಲೆ ತೀವ್ರ ಹೊಡೆತ ಬೀಳಲಿದೆ ಎಂದಿದ್ದಾರೆ.
ಉರ್ಜಿತ್ ಪಟೇಲ್ ರಾಜೀನಾಮೆ ನಂತರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮನ ಮೋಹನ್ ಸಿಂಗ್, ಉರ್ಜಿತ್ ಪಟೇಲ್ ಅವರು ಒಬ್ಬ ಉತ್ತಮ ಅರ್ಥಶಾಸ್ತ್ರಜ್ಞರು ಎಂಬುದು ಎಲ್ಲರಿಗೂ ತಿಳಿದಿದೆ. ಅವರು ಆರ್ಥಿಕ ನೀತಿ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳುತ್ತಿದ ನಿರ್ಧಾರಗಳು ನಿಜಕ್ಕೂ ಶ್ಲಾಘನೀಯ. ಡಾ. ಉರ್ಜಿತ್ ಪಟೇಲ್ ಅವರ ಧಿಡೀರ್ ಪದತ್ಯಾಗದಿಂದ ದೇಶದ ಆರ್ಥಿಕತೆ ಮೇಲೆ ತೀವ್ರ ಹೊಡೆತ ಬೀಳಲಿದೆ ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪ್ರತಿಕ್ರಿಯಿಸಿ ಪಟೇಲ್ ರಾಜೀನಾಮೆಯಿಂದ ನನಗೆ ಆಶ್ಚರ್ಯವೇನೂ ಆಗಿಲ್ಲ ಯಾವುದೇ ಸ್ವಾಭಿಮಾನಿ ವಿದ್ವಾಂಸ ಈ ಎನ್ ಡಿ ಎ ಸರ್ಕಾರದ ಜತೆ ಕೆಲಸ ಮಾಡಲು ಇಚ್ಚಿಸುವುದಿಲ್ಲ ಎಂದಿದ್ದಾರೆ