ವಿಟ್ಲ, ಅ18: ಬಿಜೆಪಿ ವತಿಯಿಂದ ಮರಳು ಸಮಸ್ಯೆ ವಿರುದ್ಧ ನಡೆದ ಉಪವಾಸ ಸತ್ಯಗ್ರಹದ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪುತ್ತೂರು ಶಾಸಕಿಯನ್ನು ಅವಹೇಳನಕಾರಿ ನಿಂದಿಸಿದ್ದಾರೆ ಎಂದು ಆರೋಪಿಸಿ ವಿಟ್ಲ ಬ್ಲಾಕ್ ಕಾಂಗ್ರೆಸ್ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದೆ.
ವಿಟ್ಲ ನಾಡಕಚೇರಿ ಬಳಿ ಬಿಜೆಪಿ ವತಿಯಿಂದ ಒಂದು ದಿನದ ಉಪವಾಸ ಸತ್ಯಗ್ರಹ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರು, ತನ್ನ ಭಾಷಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರನ್ನು ಅರೆಮರ್ಲಾ ಸಚಿವ ಎಂದು ಅವಹೇಳಕಾರಿಯಾಗಿ ನಿಂದಿಸಿದ್ದಾರೆ. ಅದಲ್ಲದೇ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಅವರ ಬಗ್ಗೆ ಕೂಡಾ ನಿಂದಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ವಿರುದ್ಧ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಅವರು ದೂರು ನೀಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.