ಚಾಮರಾಜನಗರ, ಡಿ 14(SM): ಚಾಮರಾಜನಗರ ಜಿಲ್ಲೆಯ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ 11 ಮಂದಿ ಮೃತಪಟ್ಟಿದ್ದು ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಸರಕಾರ ಘೋಷಣೆ ಮಾಡಿದೆ. ಅಲ್ಲದೆ ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ.
ಶುಕ್ರವಾರ ಸಂಜೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಹೇಳಿಕೆ ನೀಡಿದ್ದಾರೆ. 'ಸುಳವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರಸಾದ ಸೇವಿಸಿದ 11 ಭಕ್ತರು ಮೃತಪಟ್ಟಿದ್ದರು. ಈ ಘಟನೆ ಅತ್ಯಂತ ಧಾರುಣವಾಗಿದ್ದು, ಇದು ಕರಾಳ ದಿನ' ಎಂದು ಸಿಎಂ ಹೇಳಿದರು.
'ಜಿಲ್ಲಾ ಉಸ್ತುವಾರಿ ಸಚಿವರಿಗೆ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದೇನೆ. ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಅಸ್ವಸ್ಥಗೊಂಡವರ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆಯನ್ನು ನೀಡಿದ್ದಾರೆ.