ಮಂಗಳೂರು, ಡಿ15(SS): ಭಾರತದ ಫುಟ್ಬಾಲ್ ತಂಡಕ್ಕೆ ಕರಾವಳಿಯ ಕ್ರೀಡಾಪಟುವೊಬ್ಬರು ಆಯ್ಕೆಯಾಗಿ ಮೊದಲ ಸ್ಥಾನ ಪಡೆದುಕೊಳ್ಳುವ ಮೂಲಕ ಕರಾವಳಿಯ ಕಂಪನ್ನು ಎಲ್ಲೆಡೆ ಪಸರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಿಖಿಲ್ ಪೂಜಾರಿ (23) ಭಾರತದ ಫುಟ್ಬಾಲ್ ತಂಡಕ್ಕೆ ಆಯ್ಕೆಯಾದ ಕ್ರೀಡಾಪಟು.
ಎ.ಎಫ್.ಸಿ ಏಷ್ಯನ್ ಕಪ್ ಫುಟ್ಬಾಲ್ ಟೂರ್ನಿಯ ಪೂರ್ವ ಸಿದ್ಧತಾ ಶಿಬಿರಕ್ಕೆ ಭಾರತದ 34 ಸದಸ್ಯರನ್ನು ಒಳಗೊಂಡ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಕರಾವಳಿಯ ಕ್ರೀಡಾಪಟು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ನಿಖಿಲ್ ಪೂಜಾರಿ ಹುಟ್ಟಿ ಬೆಳೆದದ್ದು ಮಹಾರಾಷ್ಟ್ರದಲ್ಲಿ. ಬಾಲ್ಯದಲ್ಲಿಯೇ ಕ್ರೀಡಾಕ್ಷೇತ್ರದತ್ತ ಆಕರ್ಷಿತರಾಗಿದ್ದ ಇವರಿಗೆ ಫುಟ್ಬಾಲ್ ಕ್ರೀಡೆಯಲ್ಲಿ ಅಪಾರ ಒಲವಿತ್ತು.