ಬೆಂಗಳೂರು, ಡಿ 16(SM): ಮಧ್ಯಪ್ರದೇಶ, ರಾಜಸ್ಥಾನದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ಸೋಮವಾರ ನಡೆಯಲಿದ್ದು, ಈ ಕಾರ್ಯಕ್ರಮ ಮಹಾಮೈತ್ರಿಯ ಮತ್ತೊಂದು ವೇದಿಕೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಸೋಮವಾರ ನಡೆಯುವ ಸಮಾರಂಭಗಳು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ವಿಚಾರವಾಗಿದೆ. ದೇಶದಲ್ಲಿ ನಮ್ಮನ್ನು ಬಿಟ್ಟರೆ ಮತ್ತೊಬ್ಬರಿಲ್ಲ ಎನ್ನುವವರಿಗೆ ಆ ಸಮಾರಂಭದ ಮೂಲಕ ಸ್ಪಷ್ಟ ಸಂದೇಶ ರವಾನೆಯಾಗಲಿದೆ. ಮಹಾ ಮೈತ್ರಿಯ ಮತ್ತೊಂದು ವೇದಿಕೆ ಇದಾಗಲಿದೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ಇನ್ನು ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್ನಾಥ್, ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಹಲವಾರು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಕಮಲ್ನಾಥ್ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.