ಮಂಗಳೂರು, ಡಿ 16(SM): ಮುಂದಿನ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಡಳಿತ ನೀಡಲಿ ಎಂದು ಮಂಗಳೂರು ಜೆಡಿಎಸ್ ಘಟಕ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿಯವರ 59ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯುವ ಜೆಡಿಎಸ್ ಘಟಕದ ವತಿಯಿಂದ ಮಂಗಳೂರಿನ ಇತಿಹಾಸ ಪ್ರಸಿದ್ಧ ಕ್ಷೇತ್ರ ಕುದ್ರೋಳಿ ಗೊಕರ್ಣನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮುಖ್ಯಮಂತ್ರಿಗಳು ಪೂರ್ಣಾವಧಿ ಆಡಳಿತವನ್ನು ನಡೆಸಲಿ ಹಾಗೂ ರಾಜ್ಯದ ಜನತೆಗೆ ಬೇಕಾಗುವಂತಹ ಆಡಳಿತವನ್ನೇ ಸಿಎಂ ನೀಡಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಸಿಎಂ ಅವರ ನೂರಾರು ಅಭಿಮಾನಿಗಳು ಭಾಗಿಯಾಗಿದ್ದರು.
ಇನ್ನು ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಕೂಡ ಮುಖ್ಯಮಂತ್ರಿಗಳಿಗೆ ಶುಭ ಕೋರಿದ್ದಾರೆ.