ಬೆಂಗಳೂರು,ಡಿ 17 (MSP): ರಾಜ್ಯದ ಮೀನು ಖರೀದಿಗೆ ಗೋವಾ ಹಿಂದೇಟು ಹಾಕುತ್ತಿರುವ ಹಿನ್ನಲೆಯಲ್ಲಿ ಮೀನುಗಾರರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಹೀಗಾಗಿ ತಕ್ಷಣ ಪ್ರಧಾನಿ ಮೋದಿಯವರು ಮಧ್ಯ ಪ್ರವೇಶಿಸಿ ಈ ಸಮಸ್ಯೆ ಬಗೆಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಒತ್ತಾಯಿಸಿದ್ದಾರೆ.
ಅವರು ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಲಿಂಗರಾಜು ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿರುವ ಅವರು, ಗೋವಾ ಸರ್ಕಾರ ಕರ್ನಾಟಕ ಮೀನು ಖರೀದಿಗೆ ನಿರ್ಬಂಧ ಹೇರಿದೆ. ಇದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಒಳಿತು ಎಂದರು.
ಅಲ್ಲದೆ ಇದಕ್ಕಾಗಿ ಅದಷ್ಟೂ ಬೇಗ ಪ್ರಧಾನಿ ಮೋದಿಯನ್ನು ಬೇಟಿ ಮಾಡಿ ರಾಜ್ಯಗಳ ನಡುವಿನ ಸಮಸ್ಯೆಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಾಮಾಜಿಕ ,ರಾಜಕೀಯ,ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮೀನುಗಾರ ಸಮುದಾಯದ ಬಲವರ್ಧನೆ ಪಕ್ಷದ ಮುಖ್ಯ ಉದ್ದೇಶವಾಗಿದೆ. ಹೀಗಾಗಿ ನೂತನ ಕಾಂಗ್ರೆಸ್ ಮೀನುಗಾರ ವಿಭಾಗ ಆರಂಭಿಸಲಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ನೂತನ ಅಧ್ಯಕ್ಷ ಲಿಂಗರಾಜು, ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮೀನುಗಾರರ ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ಸಭಾಪತಿ ಉಪಸ್ಥಿತರಿದ್ದರು.