ಮಂಗಳೂರು,ಡಿ 17 (MSP): ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 59ನೇ ವರ್ಷಕ್ಕೆ ಕಾಲಿಟ್ಟಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಕುದ್ರೊಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾರ್ಚನೆ ನೆರವೇರಿಸುವ ಮೂಲಕ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಿಸಲಾಯಿತು.
ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ಈ ರಾಜ್ಯದಲ್ಲಿ ಇನ್ನಷ್ಟು ಪ್ರಗತಿಪರ ಯೋಜನೆಗಳನ್ನು ಬಡವರಿಗಾಗಿ ರೂಪಿಸಲಿ, ದೇವರು ಅವರಿಗೆ ಇನ್ನಷ್ಟು ಶಕ್ತಿ ಮತ್ತು ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಯುವ ಜೆಡಿಎಸ್ ನ ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಫೈಝಲ್ , ಮಂಗಳೂರು ಉತ್ತರ ಪ್ರಧಾನ ಕಾರ್ಯದರ್ಶಿ ಭರತ್ ಜಿ ಹೆಗ್ಡೆ, ಉತ್ತರ ಅಧ್ಯಕ್ಷ ರತೀಶ್ ಕರ್ಕೇರ, ಲಿಕಿತ್ ಅಂಚನ್ ,ಉತ್ತರ ಉಪಾಧ್ಯಕ್ಷ ಹಿತೇಶ್ ರೈ,ವಿದ್ಯಾರ್ಥಿ ಜನತಾದಳ ಅಧ್ಯಕ್ಷ ಸಿನಾನ್ ಉಪಸ್ಥಿತರಿದ್ಧರು.