ಮಂಗಳೂರು, ಅ 19: ಸಸಿಕಾಂತ್ ಸೆಂಥಿಲ್ ಎಸ್ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು.
ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು. ಸಸಿಕಾಂತ್ ಸೆಂಥಿಲ್ ಅವರು ಈ ಹಿಂದೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.